ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಇದರ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯ ಫೆ.7 ರಂದು ಬೆಳ್ತಂಗಡಿ ಚರ್ಚ್ ನ ಸಿ.ವಿ.ಸಿ ಹಾಲ್ ನಲ್ಲಿ ನಡೆಯಿತು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲಿಸುವ ಮೂಲಕ ಮಾತನಾಡುತ್ತಾ ತಾಲೂಕಿನಲ್ಲಿ ಸುಮಾರು 540 ಸ್ತ್ರೀಶಕ್ತಿ ಸಂಘಗಳು ಕಾರ್ಯ ನಿರ್ವಹಿಸುತ್ತವೆ. ಸರಕಾರ ಬೇರೆಬೇರೆ ರೀತಿಯಲ್ಲಿ ಸಹಾಯ ಮಾಡುವ ಜೊತೆಯಲ್ಲಿ ಮಹಿಳೆಯರ ಅಭಿವೃದ್ಧಿ ಶಕ್ತಿಯನ್ನು ನೀಡುವ ಯೋಜನೆ ಹಮ್ಮಿಕೊಂಡಿದೆ. ಕುಟುಂಬದ ಅಭಿವೃದ್ಧಿ ಹೊಂದಲು ತಾಯಂದಿರ ಕೊಡುಗೆ ಅಪಾರ. ಅದರಂತೆ ಒಂದು ಸಮಾಜದ ಪರಿವರ್ತನೆಯ ಪ್ರಮುಖ ರೂವಾರಿಗಳು. ಮಾತೆಯರು ತಾಲೂಕಿನ ವಿವಿಧ ಬಗೆಯ ಉತ್ಪಾದನೆ ಮಾಡಲು ಕೇಂದ್ರ ಸರಕಾರದ ಕೌಶಲ್ಯ ಅಭಿವೃದ್ಧಿ ಸವಲತ್ತುಗಳನ್ನು ಒದಗಿಸಿ ಕೊಡುವ ಭರವಸೆಯನ್ನು ನೀಡಿದರು.
ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಗೀತಾ ಉಪಾಧ್ಯಾಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್, ಜಿಲ್ಲಾ ಸ್ತ್ರೀ ಸಂಘದ ಅಧ್ಯಕ್ಷೆ ಮಮತಾ ಪಿ.ನಾಯ್ಕ್ ಹಾಗೂ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
2021-22 ನೇ ವರ್ಷದ ವಾರ್ಷಿಕ ವರದಿಯನ್ನು ಕೋಶಾಧಿಕಾರಿ ಪುಷ್ಪಲತಾ ವಾಚಿಸಿದರು.
ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಡಕೊಟ್ಟು ಸ್ವಾತಿ ಸ್ತ್ರೀಶಕ್ತಿ ಸ್ವಸಹಾಯ ಸಂಘ ಹಾಗೂ ಕಣಿಯೂರು ಗೊಂಚಲು ಸ್ತ್ರೀ ಶಕ್ತಿ ಪ್ರಥಮ ಸ್ಥಾನ ಪಡೆದ ಸಮಿತಿ ಅಧ್ಯಕ್ಷ, ಸದಸ್ಯರನ್ನು ವೇದಿಕೆಯಲ್ಲಿ ಶಾಸಕರು ಸನ್ಮಾನಿಸಿ ಗೌರವಿಸಿದರು.
ತಾಲೂಕಿನ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಹೊಯ್ಸಳ, ಶೌರ್ಯ ಪ್ರಶಸ್ತಿ ವಿಜೇತ ಪ್ರತಿಭಾನ್ವಿತ ವಿದ್ಯಾರ್ಥಿನಿ ಅಕ್ಷರ ಎ.ಎನ್ ರವರನ್ನು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಶಾಸಕರು ಸನ್ಮಾನಿಸಿ ಗೌರವಿಸಿದರು. ಹಾಗೂ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ವೇದಿಕೆಯಲ್ಲಿ ಗೌರವಿಸಿದರು.
ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿಯರು, ಅಂಗನವಾಡಿ ಕೇಂದ್ರ ಕಾರ್ಯಕರ್ತೆಯವರು, ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದರು.
ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಡಳಿತ ಮಂಡಳಿ ಸದಸ್ಯೆ ಉಷಾ ಸ್ವಾಗತಿಸಿದರು. ಶಶಿಕಲಾ ಧನ್ಯವಾದವಿತ್ತರು.