ಉಜಿರೆ: ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ಅಯ್ಯಪ್ಪಸ್ವಾಮಿ ಹಾಗೂ ಪರಿವಾರ ದೈವ-ದೇವರ ನೂತನ ಗುಡಿಗಳ ಮುಂಭಾಗದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರ ಪ್ರದೇಶಾಭಿವೃದ್ಧಿ ನಿಧಿಯನ್ವಯ ಹೈ ಮಾಸ್ಟ್ ದೀಪವನ್ನು ಫೆ. 7ರಂದು ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಅವರು ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ಜಯ ಮೋನಪ್ಪ ಗೌಡ, ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಪ್ರೀತಂ ಡಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಾಯ,ಶ್ರೀ ಅಯ್ಯಪ್ಪ ಭಜನಾ ಮಂದಿರ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ತಾಲೂಕು ತುಳು ಶಿವಳ್ಳಿ ಸಭಾಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ಪರಾರಿ ವೆಂಕಟ್ರಮಣ ಹೆಬ್ಬಾರ್, ಧರ್ಮಸ್ಥಳದ ಪಾರುಪತ್ಯದಾರ ಲಕ್ಷ್ಮೀನಾರಾಯಣ ರಾವ್, ಉಜಿರೆ ಜನಾರ್ದನ ಸೊಸೈಟಿ ಅಧ್ಯಕ್ಷ ಗಂಗಾಧರ ರಾವ್ ಕೆವುಡೇಲು, ಕುಶಾಲಪ್ಪ ಗೌಡ ಪೂವಾಜೆ, ಜಯರಾಮ ಶೆಟ್ಟಿ, ಮಹೇಶ್ ಕಜೆ ಮೊದಲಾದವರು ಉಪಸ್ಥಿತರಿದ್ದರು. ರಾಘವೇಂದ್ರ ಬೈಪಡಿತ್ತಾಯರು ಶಾಸಕ ಪ್ರತಾಪಸಿಂಹ ನಾಯಕ್ ರಿಗೆ ಸ್ಮರಣಿಕೆ ನೀಡಿ ಗೌ ರವಿಸಿದರು. ಮುರಳಿಕೃಷ್ಣ ಆಚಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.