ಉಜಿರೆ ಗ್ರಾ.ಪಂ. ವ್ಯಾಪ್ತಿಯ ನಿವೇಶನ ರಹಿತ 75 ಮಂದಿಗೆ ಹಕ್ಕು ಪತ್ರ ವಿತರಣೆ

0

ಉಜಿರೆ:ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತ ಫಲಾನುಭವಿಗಳ ಪೈಕಿ 75 ಮಂದಿ ನಿವೇಶನ ರಹಿತರಿಗೆ ನಿವೇಶನ ಹಕ್ಕು ಪತ್ರವನ್ನು ಶಾಸಕ ಹರೀಶ್ ಪೂಂಜ ಫೆ.8 ರಂದು ಉಜಿರೆ ಶಾರದಾ ಮಂಟಪದಲ್ಲಿ ವಿತರಿಸಿದರು. ಬಳಿಕ ಮಾತನಾಡಿ ಇಂದು ನೀಡಿದ 75 ಮಂದಿಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಮಂಜೂರು ಮಾಡಲಾಗುವುದು. ಉಜಿರೆ ಅರಳಿಯಲ್ಲಿ 160 ಮಂದಿಗೆ ಅತೀ ಶೀಘ್ರದಲ್ಲಿ ನಿವೇಶನ ಮಂಜೂರು ಮಾಡಲಾಗುವುದು ಎಂದರು.


ಗ್ರಾ.ಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಸದಸ್ಯರು, ಫಲಾನುಭಾವಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಸ್ವಾಗತಿಸಿದರು. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ನಿರೂಪಿಸಿ , ಕಾರ್ಯದರ್ಶಿ ಶ್ರವಣ್ ವಂದಿಸಿದರು.

LEAVE A REPLY

Please enter your comment!
Please enter your name here