ವೇಣೂರು: ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ 49ನೇ ವಾರ್ಷಿಕೋತ್ಸವ ಸಮಾರಂಭವು ಫೆ. 8ರಂದು ಜರಗಿತು.
ಬೆಳಿಗ್ಗೆ ಗಣಹೋಮದ ಬಳಿಕ ಮಾರೂರು ಖಂಡಿಗದ ವೇ|ಮೂ| ರಾಮದಾಸ ಅಸ್ರಣ್ಣರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ನಳ ದಮಯಂತಿ ಯಕ್ಷಗಾನ ಬಯಲಾಟ ಜರಗಿತು. ಶಾಸಕ ಹರೀಶ್ ಪೂಂಜ, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಭಜನಾ ಮಂಡಳಿ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಗೌರವಾಧ್ಯಕ್ಷ ಶಾಂತಿರಾಜ ಜೈನ್ ಕೊಡಂಗೆ, ಕಾರ್ಯದರ್ಶಿ ಸತೀಶ್ ಕುಲಾಲ್, ಕೋಶಾಧಿಕಾರಿ ರಾಜು ಪೂಜಾರಿ, ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ಹರೀಶ್ ಬಾಡಾರು ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದು, ಕಾರ್ಯಕ್ರಮಗಳ ಯಶಸ್ವಿಗೆ ಸಹಕರಿಸಿದರು.