ಫೆ.12: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ

0

ಉಜಿರೆ: ಉಜಿರೆ ಗ್ರಾಮದ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವಾರ್ಷಿಕ ಜಾತ್ರೆ ಫೆ.12 ರಂದು ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಉಜಿರೆ ಯು. ವಿಜಯ ರಾಘವ ಪಡ್ವೆಟ್ನಾಯ ರವರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ ಶ್ರೀ ಮಹಾಗಣಪತಿ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ದೇವರ ಸನ್ನಿಧಿಯಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು, ಶ್ರೀ ಮಹಾಗಣಪತಿ ಭಜನಾ ಮಂಡಳಿ ಮಕ್ಕಳ ಭಜನಾ ತಂಡದ ಉದ್ಘಾಟನೆ, ಭಜನೆ, ಮಧ್ಯಾಹ್ನ ಮಹಾ ಪೂಜೆ, ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ರಂಗ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಕಾಳರಾತ್ರಿ ದೈವದ ನೇಮೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿ ಅಧ್ಯಕ್ಷರು ಪದಾಧಿಕಾರಿಗಳು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here