ಅಳದಂಗಡಿ: ಶ್ರೀ ಮಹಾಗಣಪತಿ ದೇವರಿಗೆ ಶಾಸಕ ಹರೀಶ್ ಪೂಂಜರಿಂದ ರಜತ ಕವಚ ಸಮರ್ಪಣೆ

0

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ, ಅಳದಂಗಡಿ ಇದರ ನವೀಕರಣ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ದೇವರಿಗೆ ನಡೆದ ಬ್ರಹ್ಮ ಕಲಶದ ಪಾವನ ಕ್ಷಣದಲ್ಲಿ ಪಾಲ್ಗೊಂಡು ಶ್ರೀ ಮಹಾಗಣಪತಿ ದೇವರಿಗೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ,ಶಾಸಕ ಹರೀಶ್ ಪೂಂಜರವರು ರಜತ ಕವಚ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ.ಶಶಿಧರ ಡೋಂಗ್ರೆ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಸ್ವಾಗತ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಅಜಿಲ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ನಿತ್ಯಾನಂದ ಶೆಟ್ಟಿ, ಆರ್ಚಕ ಸೋಮನಾಥ ಮಯ್ಯ, ಕೋಶಾಧಿಕಾರಿ ಅನಿಲ್ ಕೊಟ್ಟಾರಿ, ಹಾಗೂ ಸಮಿತಿಯ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here