ಉಜಿರೆ: ಉಜಿರೆಯಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ನೂತನ ಆಡಳಿತ ಮಂಡಳಿಯ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸಾವಿತ್ರಿ ರೈ, ಉಪಾಧ್ಯಕ್ಷರಾಗಿ ರಾಜಶ್ರೀ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಸ್ಥಾನದ ನಿರ್ದೇಶಕರಾಗಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಾವಿತ್ರಿ ರೈ ಯವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಳಿಕ ಅವರು ಸಹಕಾರ ಕ್ಷೇತ್ರ ಬಗ್ಗೆ ಅಪಾರ ಅನುಭವ ಹೊಂದಿದವರಾಗಿದ್ದಾರೆ.
ದ.ಕ. ಜಿಲ್ಲಾ ಸಹಕಾರ ಯೂನಿಯನ್‌ನಲ್ಲಿ ನಿರ್ದೇಶಕರಾಗಿ ದ.ಕ. ಜಿಲ್ಲೆಯಾದ್ಯಂತ ಸಹಕಾರ ಸಂಘ ಸಂಸ್ಥೆಗಳಿಗೆ ಸಹಕಾರ ತರಬೇತಿ ಮತ್ತು ಪ್ರಚಾರ ನೀಡುವ ಕೆಲಸ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಹಿರಿಯ ಸಹಕಾರಿಗಳ ಮಾರ್ಗದರ್ಶನದಲ್ಲಿ ಕೆಲಸ ನಿರ್ವಹಿಸಿದ ಅನುಭವ ಪಡೆದುಕೊಂಡವರು. ಸಾಮಾನ್ಯ ಸ್ಥಾನದ ನಿರ್ದೇಶಕರಾಗಿ, ಇದೀಗ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಜಶ್ರೀ ಹೆಗ್ಡೆಯವರ ರಾಜಕೀಯ ದುರೀಣರು. ದ.ಕ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ, ತಾಲೂಕು ಪಂಚಾಯತ್ ಅಧ್ಯಕ್ಷರಾಗಿ, ಜನತಾದಳದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದವರು.