Site icon Suddi Belthangady

ವೇಣೂರು ಶ್ರೀ ಮಹಾಲೀಂಗೇಶ್ವರ ದೇವರ ಬ್ರಹ್ಮಕಲಶೋತ್ಸವ: ಭರದಿಂದ ಸಾಗುತ್ತಿದೆ ಕೆಲಸ ಕಾರ್ಯಗಳು

ವೇಣೂರು: ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ 18 ರಿಂದ ಮಾ 1ರ ವರೆಗೆ ವಿವಿಧ ವೈದಿಕ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

ಅಜಿಲ‌ ಸೀಮೆಯ ಅತ್ಯಂತ ಪುರಾತನ ಹಾಗೂ ಕಾರಣಿಕ ಕ್ಷೇತ್ರವಾದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಕೆಲಸ ಕಾಮಗಾರಿಗಳು ರಾತ್ರಿ ಹಗಲೆನ್ನದೆ ಭರದಿಂದ ಸಾಗುತ್ತಿದ್ದು ಊರ- ಪರವೂರ ಭಕ್ತರು, ಸಮಿತಿಯ ಸರ್ವರೂ ದುಡಿಯುತ್ತಿದ್ದಾರೆ.

ಈಗಾಗಲೇ ದೇವಸ್ಥಾನದ ಪೂರ್ಣ ಕೆಲಸಗಳು ಸಾಗುತ್ತಿದ್ದು ಸೀಮೆಯ ದೇವರ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆಗಳು ನಡೆಯುತ್ತಿದೆ.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ,ಶಾಸಕ ಹರೀಶ್ ಪೂಂಜ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪುರುಷೋತ್ತಮ ರಾವ್,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾದ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ ಹಾಗೂ ಸಮಿತಿಯ ಪದಾಧಿಕಾರಿಗಳು ಬ್ರಹ್ಮಕಲಶೋತ್ಸವದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ.

Exit mobile version