ಬೆಳ್ತಂಗಡಿ: ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್‌ಗಳನ್ನು ಬ್ಲಾಕ್ ಮಾಡುವ ಹೊಸ ವಿಧಾನವನ್ನು ದ.ಕ.ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್‌ಗಳು ಸೈಬರ್ ಅಪರಾಧ ನಾರ್ಕೊಟಿಕ್ಸ್ ಅಪರಾಧ ಸೇರಿದಂತೆ ಇತರೆ ಗಂಭೀರ ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು ಗಣನೀಯವಾಗಿ ಕಂಡುಬಂದಿರುತ್ತದೆ. ಇಂತಹ ಮೊಬೈಲ್ ಫೋನ್‌ಗಳ ದುರ್ಬಳಕೆಯನ್ನು ತಡೆಗಟ್ಟಲು ಕೇಂದ್ರ ಟೆಲಿಕಮ್ಯುನಿಕೇಶನ್ ಇಲಾಖೆಯಿಂದ ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್‌ಗಳನ್ನು ಬ್ಲಾಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿರುತ್ತದೆ ಹಾಗೂ ಪೊಲೀಸ್ ಇಲಾಖೆಯಿಂದ ಕೂಡಾ ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ.
p>