ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳಾಲು : ಇಲ್ಲಿಯ ಮಾಯ ಶ್ರೀ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಮಾ.3 ರಿಂದ 7 ರವರೆಗೆ ನಡೆಯಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.15 ರಂದು ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಚ್. ಪದ್ಮ ಗೌಡ ಮತ್ತು ಸದಸ್ಯರು, ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಆಡಳಿತ ಮೊಕ್ತೇಸರ ಜೀವಂದರ ಕುಮಾರ್ ಜೈನ್, ಮಾಯ ಗುತ್ತು ಪುಷ್ಪದಂತ ಜೈನ್, ಅರ್ಚಕ ಕೇಶವ ರಾಮಾಯಾಜಿ, ಬೆಳಾಲು ಶ್ರೀ ಧ. ಮ. ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ, ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ದಾಮೋದರ ಸುರುಳಿ, ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಭಜನಾ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ, ಮಾಯ ಫ್ರೆಂಡ್ಸ್ ಅಧ್ಯಕ್ಷ ರಾಧಾಕೃಷ್ಣ, ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಊರ ಭಕ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here