Site icon Suddi Belthangady

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ದೇವರಿಗೆ ಸಹಸ್ರ ಸೀಯಾಳಾಭಿಷೇಕ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಪ್ರಯುಕ್ತ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಶ್ರೀ ದೇವರಿಗೆ ಸಹಸ್ರ ಸೀಯಾಳಾಭಿಷೇಕವು ಫೆ.18 ರಂದು ನಡೆಯಿತು.

ದೇವಸ್ಥಾನದ ಅರ್ಚಕ ರಘುರಾಮ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತು ಸದಸ್ಯರು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ ಮತ್ತು ಪದಾಧಿಕಾರಿಗಳು, ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು, ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ, ಮಾತೃ ಮಂಡಳಿ ಅಧ್ಯಕ್ಷೆ ಧನಲಕ್ಷ್ಮಿ ಚಂದ್ರಶೇಖರ ಕೋಟ್ಯಾನ್ ಸಬರಬೈಲು, ಭಕ್ತಾದಿಗಳು ಉಪಸ್ಥಿತರಿದ್ದರು.

Exit mobile version