ನಾಳ : ನ್ಯಾಯತರ್ಪು ಸಮೀಪದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಕ್ಕದಲ್ಲಿರುವ ಸಾರ್ವಜನಿಕ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ಸಲ್ಲಿಸಿ ವರ್ಷಗಳೆ ಕಳೆದರು ಕಾಮಗಾರಿ ವಿಳಂಬಕ್ಕೆ ಸ್ಥಳೀಯ ಸಾರ್ವಜನಿಕರಿಂದ ವ್ಯಾಪಕವಾಗಿ ಅಕ್ರೋಶ ವ್ಯಕ್ತಪಡಿಸಿದರು ಹಾಗೂ ಮುಂದಿನ ದಿನಗಳಲ್ಲಿ ಬರುವ ಚುನಾವಣಾ ಬಹಿಷ್ಕಾರ ಘೋಷಣೆ ಮಾಡುವುದಾಗಿ ಬೃಹತ್ ಗಾತ್ರದ ಬ್ಯಾನರ್ ಹಾಕುವ ಮೂಲಕ ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದರು.