ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ.19 ರಿಂದ ಪ್ರಾರಂಭಗೊಂಡು ಮಾ.1 ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಸುಮಾರು 22 ಕಿ.ಮಿ ಮೈಸೂರು ದಸರಾ ಉತ್ಸವದ ಮಾದರಿಯಲ್ಕಿ ದೀಪಾಲಂಕಾರ ಮಾಡಿದ್ದು ಇದರ ವಿದ್ಯುತ್ ದೀಪಾಲಂಕಾರಕ್ಕೆ ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ,ಶಾಸಕ ಹರೀಶ್ ಪೂಂಜ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಯನ್.ಪುರುಷೋತ್ತಮ ರಾವ್, ಬ್ರಹ್ಮಕಲಶೋತ್ಸವದ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞನಾರಾಯಣ ಭಟ್, ಪ್ರಮುಖರಾದ ಸೋಮನಾಥ ಬಂಗೇರ ವರ್ಪಾಳೆ ಹಾಗೂ ಸಮಿತಿಯ ಸರ್ವಸದಸ್ಯರು, ಊರ, ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.