ಬೆಳ್ತಂಗಡಿ:. ಕರಾವಳಿ ಮಲೆನಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಲುದೊಡ್ಡ ಪ್ರಮಾಣದ ಈಡಿಗ-ಬಿಲ್ಲವ ಬಂಧುಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿರುವ ಸರ್ಕಾರದ ಆದೇಶಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತ ಪಡಿಸಿದ್ದಾರೆ.
ಸರ್ಕಾರದ ಈ ಆದೇಶದಿಂದ ಸಂವಿಧಾನದ ಅನುಚ್ಛೇದ 15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದ್ದು ಬಿಲ್ಲವ-ಈಡಿಗ ಸಮುದಾಯದ ಬಂಧುಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ ದೊರಕಲಿದೆ.
ಕರಾವಳಿ ಜಿಲ್ಲೆಯ ಬಹುಕಾಲದ ಈ ಬೇಡಿಕೆಯನ್ನು ಮನ್ನಿಸಿ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿದ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಪೂರಕವಾಗಿ ಸಹಕರಿಸಿದ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವದ್ವಯರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸುನಿಲ್ ಕುಮಾರ್‌ರವನ್ನು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಅಭಿನಂದಿಸಿದ್ದಾರೆ.