ಹೊಸಂಗಡಿಯಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ

0

ಹೊಸಂಗಡಿ : ತಾಲೂಕು ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬೆಳ್ತಂಗಡಿ ತಹಸೀಲ್ದಾರರ ನೇತೃತ್ವದಲ್ಲಿ ಫೆ.21 ರಂದು ಹೊಸಂಗಡಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಫೆ. 21 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ಪ್ರಭಾರ ತಹಸೀಲ್ದಾರ್ ಸಚ್ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಕರುಣಾಕರ ಪೂಜಾರಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನಾಗರತ್ನ, ಪಂಚಾಯತ್ ಸದಸ್ಯರು, ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಮಾಹಿತಿ ಮತ್ತು ಗ್ರಾಮದ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ನಿರೂಪಿಸಿದರು.

LEAVE A REPLY

Please enter your comment!
Please enter your name here