ಬೆಳ್ತಂಗಡಿ: ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಉತ್ತಮ ಫಲಿತಾಂಶವನ್ನು ಪಡೆಯುವುದರೊಂದಿಗೆ ಶಿಕ್ಷಣ ಸಂಸ್ಥೆಗೆ ಕೀರ್ತಿ ತರುವಂತವರಾಗಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಹೇಳಿದರು.
ಅವರು ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ಆಧುನಿಕ ತಂತ್ರಜ್ಞಾನಗಳ ಭರಾಟೆಯಲ್ಲಿ ವಿದ್ಯಾರ್ಥಿಗಳು ಕಲಿಕೆಯ ಕಡೆ ಗಮನ ಹರಿಸುವುದು ಕಡಿಮೆಯಾಗಿದೆ. ಇದು ಸಮಾಜದ ಉನ್ನತಿಗೆ ಮಾರಕವಾಗಿದೆ ಎಂದರು. ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಪ್ರಸ್ತಾವನೆಯೊಂದಿಗೆ ಮಾತಾಡಿದರು. ಕಾಲೇಜಿನ ಉಪನ್ಯಾಸಕರೆಲ್ಲರೂ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಇಇ ಪರೀಕ್ಷೆಯಲ್ಲಿ ಉನ್ನತ ದರ್ಜೆಗಳಲ್ಲಿ ಪಾಸಾದ ಸಾತ್ವಿಕ್ ಎಲ್.ಕೆ. ಇವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕು|ಪ್ರಜ್ಞಾ ಸ್ವಾಗತಿಸಿದರು. ಕು|ನಿಧಿಶಾ ಶೆಟ್ಟಿ ವಂದಿಸಿದರು. ಕು|ಸನುಷಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.
p>