Site icon Suddi Belthangady

ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ಹೊರಕಾಣಿಕೆ, ಪುಷ್ಪಕನ್ನಡಿ ಸಮರ್ಪಣೆ

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ನಾಗಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಫೆ. 21 ರಿಂದ ಪ್ರಾರಂಭಗೊಂಡು ಫೆ.28 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.


ಫೆ. 22 ರಂದು ಹತ್ಯಡ್ಕ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ನಂತರ ಭಜನಾ ಕಾರ್ಯಕ್ರಮ ವಿವಿಧ ಭಜನಾ ತಂಡದಿಂದ ನಡೆಯಿತು.

ಸಂಜೆ ಅರಸಿನಮಕ್ಕಿ ಪೇಟೆಯಿಂದ ಭವ್ಯ ಮೆರವಣಿಗೆಯೊಂದಿಗೆ ಶ್ರೀ ದೇವಿಗೆ ಪುಷ್ಪಕನ್ನಡಿಯ ಸಮರ್ಪಣೆ ಜರುಗಿತು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು, ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ದೇವಸ್ಥಾನದ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version