ಬೆಳ್ತಂಗಡಿ: ಕೇಂದ್ರ ಸರಕಾರದ ಆದೇಶದ ಮೇರೆಗೆ 2022-23 ನೇ ಸಾಲಿಗೆ ಕರ್ನಾಟಕ ರಾಜ್ಯ ಸರ್ಕಾರವು ನ್ಯಾಪೆಡ್ ಪರವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಗಮ, ಬೆಂಗಳೂರು ಇವರು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಉಂಡೆ ಕೊಬ್ಬರಿಯನ್ನು ಪ್ರತಿ ಕ್ವಿಂಟಾಲಿಗೆ ರೂ. 11,750 ರಂತೆ ಪ್ರತಿ ಎಕರೆಗೆ 6 ಕ್ವಿಂಟಾಲ್ ಗರಿಷ್ಠ ಪ್ರಮಾಣ ಪ್ರತೀ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಪ್ರಮಾಣ ಖರೀದಿಸಲು ಸೂಚಿಸಿರುವ ಮೇರೆಗೆ, ಜಿಲ್ಲಾಧಿಕಾರಿಗಳ ಸಭೆಯ ನಡವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಖರೀದಿ ಕೇಂದ್ರವನ್ನು ಫೆ.22 ರಂದು ಪ್ರಾರಂಭಿಸಿದ್ದು, ರೈತಬಾಂಧವರು ಸರ್ಕಾರದ ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಲು ವಿನಂತಿಸಲಾಗಿದೆ.