ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ, ಸನ್ಮಾನ

0

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ನಾಗಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಫೆ. 21 ರಿಂದ ಪ್ರಾರಂಭಗೊಂಡು ಫೆ.28 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಫೆ.23 ರಂದು ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದರು ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಬೂಡುಮುಗೇರು ದೇವಸ್ಥಾನದಲ್ಲಿ 13 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಸುಬ್ರಹ್ಮಣ್ಯ ಉಪಾಧ್ಯಾಯ ಅರ್ಚಕರು ಕಲ್ಲೇರಿ ರಾಮಕುಂಜ ಹಾಗೂ ನಾಗನಕಟ್ಟೆ ನಿರ್ಮಾಣಕ್ಕೆ ಸಹಕರಿಸಿದ ಎ.ಪಿ. ಪ್ರಸಾದ್ ದಂಪತಿಗಳನ್ನು, ಗರ್ಭಗುಡಿಯ ಮಹಾದ್ವಾರಕ್ಕೆ ಹಿತ್ತಾಳೆಯ ಕವಚ ಸಮರ್ಪಿಸಿದ ಅರವಿಂದ ಭಿಡೆ ಇವರುಗಳನ್ನು ಸನ್ಮಾನಿಸಲಾಯಿತು.
ಧಾಮ ಶರಣ ತಂತ್ರಿ ಪೊಳಲಿ ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ರೇಣುಕಾ ಸುಧೀರ್ ಬರೆದ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕ್ಷೇತ್ರ ಪರಿಚಯ ಪುಸ್ತಕ ಸ್ವಾಮೀಜಿಯವರು ಬಿಡುಗಡೆಗೊಳಿಸಿದರು.


ವೇದಿಕೆಯಲ್ಲಿ ಆನುವಂಶಿಕ ಆಡಳಿತ ಮೊಕ್ತೇಸರ ಎಂ.ಪಿ. ರಾಜಗೋಪಾಲ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಾಮನ ತಾಮ್ಹಣ್‌ಕರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್., ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಪದ್ಮಯ್ಯ ಗೌಡ ಉಡ್ಯೇರೆ, ಗೌರವ ಸಲಹೆಗಾರ ಜಯರಾಮ ನೆಲ್ಲಿತ್ತಾಯ ಶಿಶಿಲ, ಧರ್ಣಪ್ಪ ಗೌಡ ಅರಸಿನಮಕ್ಕಿ ಉಪಸ್ಥಿತರಿದ್ದರು.


ವಾಮನ ತಾಮ್ಹಣ್‌ಕರ್ ಸ್ವಾಗತಿಸಿ, ಕು. ಧನೀಕ್ಷ ಮತ್ತು ಬಳಗದವರು ಪ್ರಾರ್ಥಿಸಿದರು. ಮುರಳೀಧರ ಪಾಳೆಂಜ ಕಾರ್ಯಕ್ರಮ ನಿರೂಪಿಸಿದರು. ವೃಷಾಂಕ್ ಖಾಡಿಲ್ಕರ್ ವಂದಿಸಿದರು.

LEAVE A REPLY

Please enter your comment!
Please enter your name here