ಅರಸಿನಮಕ್ಕಿ : ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ನಾಗಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.25 ರಂದು ಜರಗಿತು. ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಸಂಜೆ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷ ತೆಯನ್ನು ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್. ವಹಿಸಿದ್ದರು. ಮಂಗಳೂರು ಕುದ್ರೋಳಿ ಶ್ರೀ ನಾರಾಯಣಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಧಾರ್ಮಿಕ ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಯಾಗಿ ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾ ಶ್ರಮ ಟ್ರಸ್ಟ್ ಅಧ್ಯಕ್ಷ ಡಾ | ಎಂ. ಎಂ. ದಯಾಕರ್ ಆಗಮಿಸಿದ್ದರು. ವೇದಿಕೆ ಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಾಮನ ತಾಮನಕರ್, ಹೊರೆಕಾಣಿಕೆ ಸಮಿತಿ ಸಂಚಾಲಕ ಸುಂದರ ಶೆಟ್ಟಿಗಾರ್, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಂಗಾಧರ್ ಕುಲಾಲ್ , ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಗಣೇಶ್ ಭಿಡೆ, ಕಾರ್ಯಾಲಯ ಸಮಿತಿ ಸಂಚಾಲಕ ಮುರಳೀಧರ ಶೆಟ್ಟಿಗಾರ್, ಸ್ವಯಂ ಸೇವಕ ಸಮಿತಿ ಸಂಚಾಲಕ ಆನಂದ ನಾಯ್ಕ ಉಪಸ್ಥಿತರಿದ್ದರು.
ದಿವ್ಯಶ್ರೀ, ಹೇಮಾವತಿ, ವಿದ್ಯಾಲಕ್ಷ್ಮಿ, ಸಂಧ್ಯಾ ಪ್ರಾರ್ಥಿಸಿದರು. ಆಹಾರ ಸಮಿತಿ ಸಂಚಾಲಕ ಧರ್ಮರಾಜ್ ಗೌಡ ಅಡ್ಕಾಡಿ ಸ್ವಾಗತಿಸಿದರು. ಮಹಿಳಾ ಸಮಿತಿ ಸದಸ್ಯೆ ರೇಣುಕಾ ಸುಧೀರ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸ್ವಯಂ ಸೇವಕ ಸಮಿತಿ ಸಹ ಸಂಚಾಲಕ ಅವಿನಾಶ್ ಭಿಡೆ ವಂದಿಸಿದರು.