ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ.
ಧಾರ್ಮಿಕ ಸಭೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರುವಿನ ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ, ಮಂಗಳೂರು ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ವಹಿಸಿದ್ದರು.
ವೇದಿಕೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನಂತ ಅಸ್ರಣ್ಣ, ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ,ಮಾಜಿ ಸಚಿವ ಎಂ.ನಾಗರಾಜ ಶೆಟ್ಟಿ, ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ, ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ವಿಟ್ಲ ಕ್ಷೇತ್ರದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ವೇಣೂರು ಸುಧನ್ವ ಮಹಾವೀರನಗರದ ಸತ್ಯನಾರಾಯಣ ಪೈ,ಮೂಡಬಿದ್ರೆ ಎಕ್ಸಲೆಂಟ್ ಕಾಲೇಜಿನ ಸಂಚಾಲಕ ಯುವರಾಜ್ ಜೈನ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಯನ್ ಪುರುಷೋತ್ತಮ, ಅರುವ ರಾಜ್ಯಗುತ್ತು ಪ್ರಮೋದ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಸುರೇಂದ್ರ, ಉಪಸಮಿತಿ ಸಂಚಾಲಕರಾದ ರತ್ನಾಕರ ಬುಣ್ಣನ್,ಮೋಹನ್ ಅಂಡಿಂಜೆ, ಜಗದೀಶ್ ಭಟ್ ವೇಣೂರು, ದಿನಕರ ಕುಲಾಲ್, ಪದ್ಮನಾಭ ಪೂಜಾರಿ ಬಿಯದಡಿ ಉಪಸ್ಥಿತರಿದ್ದರು.
ಸೌಮ್ಯ ಸರ್ವೇಶ್ ಜೈನ್ ಪ್ರಾರ್ಥಿಸಿ, ಶಾಸಕ ಹರೀಶ್ ಪೂಂಜ ಸ್ವಾಗತಿಸಿ, ಎಸ್.ಡಿ.ಎಂ ಕಾಲೇಜಿನ ಉಪನ್ಯಾಸಕ ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್ ವಂದಿಸಿದರು.