Site icon Suddi Belthangady

ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ

ಅರಸಿನಮಕ್ಕಿ : ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ನಾಗಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.27 ರಂದು ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಜರಗಿತು.


ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಆನುವಂಶಿಕ ಅರ್ಚಕರು ಹರಿನಾರಾಯಣ ಅಸ್ರಣ್ಣ ರವರ ದಿವ್ಯ ಉಪಸ್ಥಿತಿಯಲ್ಲಿ ಬೆಳಿಗ್ಗೆ ಪುಣ್ಯಾಹ, ಗಣಪತಿ ಹೋಮ, ಅಂಕುರ ಪೂಜೆ, ತತ್ವ ಕಲಶ ಪೂಜೆ, ತತ್ವ ಹೋಮ, ತತ್ವ ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ, ನ್ಯಾಸ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಬಿ. ದಿನೇಶ ಮಯ್ಯ ದಣಿಲ, ಅನುವಂಶಿಕ ಆಡಳಿತ ಮೊಕ್ತೇಸರರು ರಾಜಗೋಪಾಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ವಾಮನ ತಾಮ್ಹಣ್‌ಕರ್, ದೇವಸ್ಥಾನ ಅಭಿವೃದ್ಧಿ ಅಮಿತಿ ಅಧ್ಯಕ್ಷ ಗಂಗಾಧರ ಕುಲಾಲ್ ಉಡ್ಯೇರ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಸುಂದರ ಗೌಡ ಉಡ್ಯೇರ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಪದ್ಮಯ್ಯ ಗೌಡ, ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಕೃಷ್ಣಪ್ಪ ಕುಲಾಲ್, ಅರ್ಚಕ ರಾಮಕೃಷ್ಣ ರಾವ್, ಶ್ರೀ ಗಣೇಶ್ ಭಿಡೆ, ಕೋಶಾಧಿಕಾರಿ ಶ್ರೀರಂಗ ದಾಮ್ಲೆ, ಬ್ರಹ್ಮಕಲಶೋತ್ಸವ ಸಮಿತಿಯ, ಜೀರ್ಣೋದ್ಧಾರ ಸಮಿತಿಯ ಸರ್ವಸದಸ್ಯರು, ಊರವರು ಉಪಸ್ಥಿತರಿದ್ದರು.

ಸಂಜೆ ನಿತ್ಯ ಪೂಜೆ, ರಂಗಪೂಜೆ, ಉತ್ಸವ ಬಲಿ, ಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ, ವಸಂತ ಮಂಟಪ ಪೂಜೆ, ಮಹಾಪೂಜೆ ನಡೆಯಲಿದೆ.

Exit mobile version