ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನು ಆಗ್ರಹಿಸಿ, ಮಾ.1 ರಿಂದ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

0

ಬೆಳ್ತಂಗಡಿ :ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರಕಾರವನ್ನು ಅಗ್ರಹಿಸಿ ಮಾ.1 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆಯ ಅಧ್ಯಕ್ಷ ಜಯರಾಜ್ ಜೈನ್ ಮತ್ತು ಗೌರವ ಅಧ್ಯಕ್ಷ ಕೇಂದ್ರ ಸಂಘದ ಜಂಟಿ ಕಾರ್ಯದರ್ಶಿ ಜಯಾಕೀರ್ತಿ ಜೈನ್ ಹೇಳಿದರು.

ಅವರು ಫೆ.27 ರಂದು ಸಂಘದ ಕಟ್ಟಡ ಏಕತಾ ಸೌಧದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ತಾಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ತುರ್ತು ರಾಜ್ಯ ಕಾರಿಣಿ ಸಭೆ” ಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ‘ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ರಾಜ್ಯ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ಗಳನ್ನು 01-07-2022 ರಿಂದ ಜಾರಿಗೊಳಿಸಬೇಕಾಗಿತ್ತು. – ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್‌ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು, ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ವಿಧಿಸಿದಂತೆ ವಿಸ್ತ್ರತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿತ್ತು.
2023-24ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳಿಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ನೌಕರರಲ್ಲಿ ನಿರಾಸೆ ಮೂಡಿಸಿತ್ತು. ಅದಕ್ಕಾಗಿ ಮಾ.1 ರಿಂದ ಎಲ್ಲಾ ಸರಕಾರಿ ನೌಕರರು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ತುರ್ತು ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಮಾತ್ರ ಸೇವೆಯನ್ನು ಮಾಡಲಾಗುವುದು. ವಸತಿ ನಿಲಯಗಳಲ್ಲಿ ಸಹಿ ಹಾಕದೆ ಅಗತ್ಯ ಕೆಲಸ ಮಾತ್ರ ನಿರ್ವಹಿಸಲಾಗುವುದು ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ತಾಲೂಕು ಶಾಖೆಯ ಕಾರ್ಯದರ್ಶಿ ಗಂಗಾರಾಣಿ ನಾ. ಜೋಷಿ, ಉಪಾಧ್ಯಕ್ಷ ಸಿದ್ದೇಶ್, ರಾಜ್ಯ ಪರಿಷತ್ ಸದಸ್ಯ ಆನಂದ ಡಿ., ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕಿಶೋರ್, ಪ್ರಾ. ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕೋಶಾಧಿಕಾರಿ ರಾಜೇಶ್ ಹೊಕ್ಕಾಡಿಗೋಳಿ, ಪ್ರಾ. ಶಾಲಾ ಸಮಿತಿ ರಾಜ್ಯ ಉಪಾಧ್ಯಕ್ಷೆ ಮಂಜುಳಾ ಜೆ., ತಾಲೂಕು ಸಂಘದ ನಿಕಟಪೂರ್ವ ಕಾರ್ಯದರ್ಶಿ ಚಂದ್ರಶೇಖರ್, ಸದಸ್ಯರಾದ ಕೃಷ್ಣ, ನಾರಾಯಣ ಎಮ್ ನಾಯ್ಕ, ಬ್ಯಾಂಕ್ ನಿರ್ದೇಶಕ ಅಬ್ದುಲ್ ರಜಾಕ್ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here