ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಶ್ರೀ ಮಂಜುನಾಥ ದಳದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯಿಂದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸಿಸ್ಟರ್ ಅಮ್ಮಿ ರವರು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಬಗ್ಗೆ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಮಕ್ಕಳಲ್ಲಿ ಮೂಡುವಂತಹ ರಕ್ತ ಹೀನತೆ, ಆಹಾರ ಸಮತೋಲನೆ, ದಿನನಿತ್ಯ ಆಹಾರವನ್ನು ನಮ್ಮ ಜೀವನ ಶೈಲಿಯಲ್ಲಿ ಯಾವ ರೀತಿ ಅಳವಡಿಸಬೇಕು , ಹಾಗೂ ಸ್ವಚ್ಛತೆಯ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಗೈಡ್ ಸಂಯೋಜಕಿ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿ, ಸ್ವಾಗತ ಹಾಗೂ ಧನ್ಯವಾದವಿತ್ತರು.