Site icon Suddi Belthangady

ಗೆಜ್ಜೆಗಿರಿ ವಾರ್ಷಿಕ ಜಾತ್ರಾ ಮಹೋತ್ಸವ ಬೆಳ್ತಂಗಡಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ :ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ಆದಿ ದೈವ ಧೂಮಾವತಿ ಕ್ಷೇತ್ರ, ಸಾಯನ ಬೈದ್ಯರೆ ಗುರುಪೀಠ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದಲ್ಲಿ ಮಾ.16 ರಿಂದ 20 ರ ವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಮಾ.1ರಂದು ಮಾಜಿ ಶಾಸಕ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವ ಅಧ್ಯಕ್ಷ ಕೆ. ವಸಂತ ಬಂಗೇರ ಬಿಡುಗಡೆಗೊಳಿಸಿದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ನಿವೃತ್ತ ಎಸ್. ಪಿ. ಪೀತಾಂಬರ ಹೇರಾಜೆ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಮಾಜಿ ಅಧ್ಯಕ್ಷರುಗಳಾದ ಭಗೀರಥ ಜಿ., ಜಯರಾಮ ಬಂಗೇರ ಹೇರಾಜೆ, ಸಂಘದ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು, ಕೋಶಾಧಿಕಾರಿ ಶೇಖರ ಬಂಗೇರ, ನಿರ್ದೇಶಕ ಗೋಪಾಲ ಪೂಜಾರಿ ಮಚ್ಚಿನ, ಮಹಿಳಾ ವೇದಿಕೆ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಯುವ ವೇದಿಕೆ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು

Exit mobile version