ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆ.28ರಂದು ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರಪಂಚಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ವಿಜ್ಞಾನಿಗಳ ಜೀವನ ಮತ್ತು ಸಾಧನೆಯನ್ನು ವಿದ್ಯಾರ್ಥಿಗಳು ಪರಿಚಯಿಸಿದರು. ನಿತ್ಯ ಜೀವನದ ಸಾಂಪ್ರದಾಯಿಕ ಆಚರಣೆಗಳ ಹಿಂದಿನ ವೈಜ್ಞಾನಿಕ ಕಾರಣಗಳನ್ನು ಉದಾಹರಣೆಗಳ ಮೂಲಕ ವಿವರಿಸಿದರು. ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಲಾಯಿತು. ಅತ್ಯುತ್ತಮ ಮಾದರಿಗೆ ಬಹುಮಾನ ನೀಡಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ| ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ವಹಿಸಬೇಕೆಂದು ನುಡಿದು ಶುಭ ಹಾರೈಸಿದರು. ಚರ್ಚ್ ನ ಪ್ರಧಾನ ಸೇವಕ ಪ್ರೀತಮ್ ಜೋಯೆಲ್ ರೆಗೋರವರು ವಿಜ್ಞಾನ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ಏರ್ಪಡಿಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಿದರು.
ಶ್ರಾವ್ಯ ಸ್ವಾಗತಿಸಿ, ಶ್ರಾವಣಿ ವಂದಿಸಿದರು. ರೆನ್ವಿಟಾ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿಯರಾದ ಶ್ರೀಮತಿ ಕವಿತಾ ಮತ್ತು ಶ್ರೀಮತಿ ಪ್ರೀತಾ ಡಿಸೋಜ ಸಹಕರಿಸಿದರು.