ಬೆಳಾಲು ಮಾಯ ದೇವಸ್ಥಾನದ ಜಾತ್ರಾಮಹೋತ್ಸವ, ರಥೋತ್ಸವ

0

ಬೆಳಾಲು : ಶ್ರೀ ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮಾ.3 ರಿಂದ 7 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಮಾ.3 ರಂದು ಧ್ವಜಾರೋಹಣ ಮೂಲಕ ಪ್ರಾರಂಭವಾಗಿ ಮಾ.6 ರಂದು ಬೆಳಿಗ್ಗೆ ದರ್ಶನ ಬಲಿ, ರಾತ್ರಿ ರಥೋತ್ಸವ ನಡೆಯಿತು.
ಪ್ರತಿದಿನ ವೈದಿಕ ಕಾರ್ಯಕ್ರಮ, ಉತ್ಸವ, ಭಜನೆ,ಸಾಂಸ್ಕೃತಿಕ ಕಾರ್ಯಕ್ರಮಗಳು, ಅನ್ನಸಂತರ್ಪಣೆ ನಡೆಯಿತು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ದೇವಸ್ಥಾನದ ಸಿಬ್ಬಂದಿಗಳು, ವಿಲೇಯದವರು, ಊರವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

p>

LEAVE A REPLY

Please enter your comment!
Please enter your name here