


ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮುರ ಶ್ರೀರಾಮ ಭಜನಾ ಮಂದಿರದಲ್ಲಿ ಮಾ.5ರಂದು ನಡೆದ “ಹಿಂದೂ ರಾಷ್ಟ್ರ ಜಾಗೃತಿ ಸಭೆ” ಕಾರ್ಯಕ್ರಮದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ದೂರು ದಾಖಲಿಸಿದರು.
ಸಂವಿಧಾನ ಮತ್ತು ರಾಷ್ಟ್ರ ವಿರೋಧಿ ಅಜಂಡವನ್ನು ಹೊಂದಿರುವ, ಒಂದು ಧರ್ಮದ ವಿರುದ್ಧ ಇನ್ನೊಂದು ಧರ್ಮವನ್ನು ಎತ್ತಿ ಕಟ್ಟಿ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುವ ಈ ಕಾರ್ಯಕ್ರಮಕ್ಕೆ ನೇತೃತ್ವವನ್ನು ನೀಡಿದವರು, ಆಯೋಜಕರು ಮತ್ತು ಸನಾತನ ಸಂಸ್ಥೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ, ಕಾರ್ಯದರ್ಶಿಗಳಾದ ನಿಸಾರ್ ಕುದ್ರಡ್ಕ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ ಉಪಸ್ಥಿತರಿದ್ದರು.