ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೆತ್ತವರಿಗೆ ಪರೀಕ್ಷಾ ಕಾರ್ಯಾಗಾರ

0

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.8 ರಂದು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಜಿರೆಯ ಸಂಪನ್ಮೂಲ ಅಧಿಕಾರಿ ಶ್ರೀಮತಿ ಪ್ರತಿಮಾ ಕೆ. ಎಂ. ದೀಪ ಪ್ರಜ್ವಾಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಹಿಳಾ ದಿನಾಚರಣೆ ಏಕೆ ಹೇಗೆ ಎಂದು ಮಾತನಾಡಿದರು. ತದನಂತರ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿ ಹೆತ್ತವರಿಗೆ ಹೊಸ ಶಿಕ್ಷಣ ನೀತಿಯ ಕುರಿತು ಹಾಗೂ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಮಹಿಳಾ ದಿನಾಚರಣೆಯ ಕುರಿತು ಹಾಗೂ ಮಹಿಳೆಯ ಜವಾಬ್ದಾರಿಗಳು , ಮಹಿಳೆಯರ ಸಾಧನೆಗಳನ್ನು ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಉಜಿರೆ ಕ್ಲಸ್ಟರ್ ನ ಮಾನವ ಸಂಪನ್ಮೂಲ ಅಧಿಕಾರಿಯಾಗಿರುವ ಶ್ರೀಮತಿ ಪ್ರತಿಮಾ ಕೆಎಂ ಇವರನ್ನು ಮಹಿಳಾ ದಿನಾಚರಣೆಯ ಪರವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸನ್ಮಾನಿಸಲಾಯಿತು. ಮಹಿಳೆಯ ಸಾಧನೆಯನ್ನು ಬಿಂಬಿಸುವ ರಂಗೋಲಿ ಶಾಲೆಯ ಪ್ರವೇಶ ದ್ವಾರದಲ್ಲಿ ರಾರಾಜಿಸುತ್ತಿತ್ತು. ಶ್ರೀಮತಿ ಆಶಾ ಕುಮಾರಿ ಪಿ ಕಾರ್ಯಕ್ರಮವನ್ನು ನಡೆಸಿ ಸ್ವಾಗತಿಸಿದರು. ಶ್ರೀಮತಿ ರೇಖಾ ವಂದಿಸಿದರು.

LEAVE A REPLY

Please enter your comment!
Please enter your name here