ಅಂಡಿಂಜೆ ಗ್ರಾ.ಪಂ.ನಲ್ಲಿ ಆರೋಗ್ಯ ಅಮೃತ ಅಭಿಯಾನ ತರಬೇತಿ

0

ಅಂಡಿಂಜೆ: ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅನಿಮೀಯ ಮುಕ್ತತೆ ಮುಟ್ಟಿನ ನೈರ್ಮಲ್ಯತೆ ಗ್ರಾಮ ಪಂಚಾಯತು ಆರೋಗ್ಯ ಅಮೃತ ಅಭಿಯಾನ ಕುರಿತು ವಿಶೇಷ ಗ್ರಾಮಸಭೆಯು ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಜಯಂತಿ ಇವರ ಅಧ್ಯಕ್ಷತೆಯಲ್ಲಿ ಮಾ.9 ರಂದು ನಡೆಯಿತು.
ಆರೋಗ್ಯ ಅಮೃತ ಅಭಿಯಾನದ ತಾಲೂಕು ಸಂಯೋಜಕಿ ಶ್ರೀಮತಿ ಶ್ವೇತಾ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಗ್ರಾಮ ಪಂಚಾಯತು ಉಪಾಧ್ಯಕ್ಷೆ ಶ್ವೇತಾ, ಪಂಚಾಯತು ಸದಸ್ಯರಾದ ಹರೀಶ್ ಹೆಗ್ಡೆ, ಪರಮೇಶ , ಶ್ರೀಮತಿ ಶೋಭಾ ನಾಯ್ಕ, ಪಂಚಾಯತು ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಚಂಪಾ, ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ಮಲ್ಲಿಕಾ, ಆಶಾಕಾರ್ಯಕರ್ತೆಯರು ಸಾರ್ವಜನಿಕರು ಭಾಗವಹಿಸಿದ್ದರು.
ಗ್ರಾಮ ಪಂಚಾಯತು ಸಿಬ್ಬಂದಿಯಾದ ಶೀನ ಕೆ ಕಾರ್ಯಕ್ರಮ ನಿರ್ವಹಿಸಿ, ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಮಮತಾರವರು ವಂದಿಸಿದರು. ಪಂಚಾಯತು ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here