Site icon Suddi Belthangady

ರಾಜ್ಯದ 5, 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: 2022-23ರ ಶೈಕ್ಷಣಿಕ ವರ್ಷದಲ್ಲಿ 5 ಮತ್ತು 8ನೇ ತರಗತಿಗಳ ವಿದ್ಯಾರ್ಥಿಗಳ ಮೌಲ್ಯಮಾಪನ ವಿಧಾನ ಬದಲಾಯಿಸುವ (ಬೋರ್ಡ್ ಪರೀಕ್ಷೆ) ಸಂಬಂಧ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘ (ಕುಸ್ಮಾ), ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ, ಮಾನ್ಯತೆ ಪಡೆದ ಅನುದಾನ ರಹಿತ ಶಿಕ್ಷಣಗಳ ಸಂಘ (ಓಯುಆರ್‌ಎಸ್) ಅರ್ಜಿ ಸಲ್ಲಿಸಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರುರ ಅವರಿದ್ದ ನ್ಯಾಯಪೀಠ ಸರ್ಕಾರದ ಸುತ್ತೋಲೆಯನ್ನು ರದ್ದು ಪಡಿಸಿ ಆದೇಶಿಸಿದೆ.

ಫೆ.10 ರಂದು ಅರ್ಜಿಯ ವಿಚಾರಣೆ ನಡೆದಿದ್ದು,ಈ ವೇಳೆ ಸರ್ಕಾರದ ಪರ ವಕೀಲರು, ‘ಕೊರೊನಾ ವೇಳೆ ಮಕ್ಕಳಲ್ಲಿನ ಶೈಕ್ಷಣಿಕ ಗುಣಮಟ್ಟ ಕುಸಿದಿದೆ. ಈ ಹಿನ್ನೆಲೆ 5 ಮತ್ತ 8ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಈ ಪರೀಕ್ಷೆಯಲ್ಲಿ ಮಕ್ಕಳು ಅನುತ್ತೀರ್ಣರಾದರೂ ಅವರನ್ನು ಅದೇ ತರಗತಿಯಲ್ಲಿ ಮುಂದುವರೆಸುವುದಿಲ್ಲ. ಮಕ್ಕಳ ಬುದ್ಧಿವಂತಿಕೆ ನೋಡುವುದಕ್ಕಾಗಿ ಈ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ವಿವರಿಸಿದ್ದರು.

ಈ ಬಗ್ಗೆ ಸರ್ಕಾರಕ್ಕೆ ‘ಅಂಕಗಳ ಆಧಾರದಲ್ಲಿ ಮಕ್ಕಳ ಬುದ್ಧಿವಂತಿಕೆ ಅಳೆಯುವುದಕ್ಕೆ ಸಾಧ್ಯವೇ ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಯಾವುದೇ ಗೊಂದಲಗಳಿಗೆ ಒಳಗಾಗದಂತೆ ಹಾಗೂ ಎಲ್ಲ ಮಕ್ಕಳಿಗೂ ಅನ್ವಯವಾಗವಂತಿರಬೇಕು ಎಂದು ಸರ್ಕಾರಕ್ಕೆ ತಿಳಿಸಿತು. ರಾಜ್ಯ ಸರ್ಕಾರ ಯಾವುದೇ ನಿಯಮ ಮತ್ತು ಅಧಿಸೂಚನೆ ಹೊರಡಿಸುತ್ತಿಲ್ಲ. ಶಿಕ್ಷಣ ಕಾಯಿದೆ ಹಕ್ಕು ಅಡಿಗಳಲ್ಲಿ ಸುತ್ತೋಲೆ ಹೊರಡಿಸಿದೆ. ಈ ರೀತಿಯ ಸಂದರ್ಭದಲ್ಲಿ ಕಾಯಿದೆಯ ಸೆಕ್ಷನ್ 38(4) ನಿಯಮಗಳ ಪ್ರಕಾರ ಸರ್ಕಾರಗಳು ಅಧಿಸೂಚನೆ ಹೊರಡಿಸಬೇಕಾದಲ್ಲಿ ನಿಯಮಗಳ ಪ್ರಕಾರ ಇರಬೇಕು. ಮಕ್ಕಳ ಬುದ್ದಿವಂತಿಯನ್ನು ಅಳೆಯಲು ಈ ವಿಧಾನ ಸರಿಯಿಲ್ಲ ಎಂದು ಕೋರ್ಟ್ ಪರೀಕ್ಷೆಯನ್ನು ರದ್ದುಗೊಳಿಸಿದೆ.

Exit mobile version