Site icon Suddi Belthangady

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಕಾನೂನು ಅರಿವು

ಉಜಿರೆಯ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ, ವಿಶ್ವ ಮಹಿಳಾ ದಿನದ ಅಂಗವಾಗಿ, ಕಾಲೇಜಿನ ವಿದ್ಯಾರ್ಥಿನಿಯರಿಗೆ ಕಾನೂನು ಅರಿವು ಎಂಬ ವಿಷಯದ ಕುರಿತಾಗಿ ಮಾಹಿತಿಯನ್ನು ಮಾ. 11 ರಂದು ಹಮ್ಮಿಕೊಳ್ಳಲಾಯಿತು.

ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷೆ ಶ್ರೀಮತಿ ಮನೋರಮಾ ಭಟ್ ಇವರು, ಕಾನೂನು ಮಹಿಳೆಯರಿಗೆ ಎಷ್ಟು ಪೂರಕ, ಮಹಿಳೆಯರು ವೃತ್ತಿ ಕ್ಷೇತ್ರದಲ್ಲಿ ಸದೃಢರಾಗಬೇಕಾದರೆ ಕಾನೂನಿನ ಅವಶ್ಯಕತೆ ಈ ಕುರಿತಾಗಿ ಮಾಹಿತಿಯನ್ನು ನೀಡಿದರು.
ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂತೋಷ್, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ, ಉಪ ಕಾರ್ಯಕ್ರಮಾಧಿಕಾರಿ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು. ಚಿನ್ಮಯೀ ಸ್ವಾಗತಿಸಿ, ಭೂಮಿಕಾ ವಂದಿಸಿದರು. ಜ್ಯೋತಿಕಾ ಕಾರ್ಯಕ್ರಮ ನಿರೂಪಿಸಿದರು.

Exit mobile version