ಇಳಂತಿಲ : ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇರಿಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ರೂ. 6ಸಾವಿರ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ.
ಬೆಳ್ತಂಗಡಿ ಇಳಂತಿಲ ಗ್ರಾಮದ ನೇಜಿಕಾರು ಅಂಬೋಟ್ಟು ನಿವಾಸಿ ಮೊಹಮ್ಮದ್ ಶಾಫಿ (30ವ) ಬಂಧಿತ ಆರೋಪಿ. ಆರೋಪಿಯು ಕೋಡಿಂಬಾಡಿ ಗ್ರಾಮದ ಸೇಡಿಯಾಪು ಬಸ್ ತಂಗುದಾಣದಲ್ಲಿ ಅನುಮಾನಾಸ್ಪದವಾಗಿ ನಿಂತಿರುವುದನ್ನು ಪೊಲೀಸರು ಗಮನಿಸಿ ಹೋದಾಗ ಪೊಲೀಸರನ್ನು ನೋಡಿ ಆರೋಪಿ ಪರಾರಿಯಾಗಲು ಯತ್ನಿಸಿದರು.
ಈ ವೇಳೆ ಪೊಲೀಸರು ಆತನನ್ನು ಹಿಡಿದು ವಿಚಾರಿಸಿದಾಗ ಆತನಲ್ಲಿ ರೂ. 6ಸಾವಿರ ಮೌಲ್ಯದ 190 ಗ್ರಾಂ ಗಾಂಜಾ ಇರುವುದು ಬೆಳಕಿಗೆ ಬಂದಿದ್ದು, ಆತ ಗಾಂಜಾ ಮಾರಾಟಕ್ಕೆ ಗಿರಾಕಿ ಹುಡುಕಿಕೊಂಡಿರುವುದಾಗಿ ತಿಳಿಸಿದ್ದಾನೆ. ಬಂಧಿತ ಆರೋಪಿಯಿಂದ ಗಾಂಜಾವನ್ನು ವಶಕ್ಕೆ ಪಡೆದು ಕೊಂಡು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದ.ಕ ಜಿಲ್ಲಾ ಎಸ್ಪಿ ಮತ್ತು ಎಡಿಷನಲ್ ಎಸ್ಪಿ ಹಾಗು ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ಮತ್ತು ಎಸ್.ಐ ಶ್ರೀಕಾಂತ್ ರಾಥೋಡ್, ಅವರ ನೇತೃತ್ವದಲ್ಲಿ ಎ.ಎಸ್ ಐ ಲೋಕನಾಥ್ ಹೆಡ್ ಕಾನ್ ಸ್ಟೇಬಲ್ ಸ್ಕರಿಯ, ಉದಯ, ಪ್ರಶಾಂತ್ ರೈ, ಜಗದೀಶ್, ಸುಬ್ರಹ್ಮಣ್ಯ ಸಿಬ್ಬಂದಿಗಳಾದ ರೇವತಿ, ಶ್ರೀಮಂತ್ ಅವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.