
ಪಡಂಗಡಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ. ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡಂಗಡಿ ಅಂಗನವಾಡಿಯಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ಕಾರ್ಯಾಗಾರವನ್ನು ಮಾ.17ರಂದು ಆಯೋಜಿಸಲಾಗಿತ್ತು.
ಈ ತರಬೇತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಸೇರಿ ಒಟ್ಟು 22 ಮಂದಿ ಭಾಗವಹಿಸಿದ್ದರು. ಜಲ ಜೀವನ್ ಮಿಷನ್ ಅನುಷ್ಠಾನ ಬೆಂಬಲ ಸಂಸ್ಥೆಯ ಸಿಬ್ಬಂದಿ ಪುಷ್ಪಲತಾ ರವರು ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.