ಕಳಿಯ ಗ್ರಾಮ ಪಂಚಾಯತ್ ನಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮವು ಪಂಚಾಯತ್ ಸಭಾ ಭವನದಲ್ಲಿ ಮಾ.20 ರಂದು ನಡೆಯಿತು.
ಶ್ರೀಮತಿ ಸುಭಾಷಿಣಿ ಕೆ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಆರೋಗ್ಯಾಧಿಕಾರಿ ಕಛೇರಿಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ ಎ.ಆರೋಗ್ಯದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕುಸುಮ ಎನ್ ಬಂಗೇರ, ಸದಸ್ಯರಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಶ್ರೀಮತಿ ಪುಷ್ಪಾ, ಶ್ರೀಮತಿ ಇಂದಿರಾ, ಕಿರಿಯ ಆರೋಗ್ಯ ಸಹಾಯಕಿಯಾದ ಶ್ರೀಮತಿ ಶಕುಂತಲಾ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಉಷಾ, ಅಂಗನವಾಡಿ ಕಾರ್ಯಕರ್ತೆಯರಾದ ಶ್ರೀಮತಿ ನಾಗವೇಣಿ, ಶ್ರೀಮತಿ. ಭಾಗ್ಯವತಿ, ಶ್ರೀಮತಿ ಗುಣವತಿ, ಶ್ರೀಮತಿ ಸುಜಾತ, ಶ್ರೀಮತಿ ಶಶಿಕಲಾ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ನವೀನ, ಸುಮಯ್ಯ ಉಪಸ್ಥಿತರಿದ್ದರು. ಕಾರ್ಯದರ್ಶಿ ಕುಂಞ.ಕೆ ಸ್ವಾಗತಿಸಿ, ದನ್ಯವಾದವಿತ್ತರು. ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ಸುಚಿತ್ರಾ, ಶ್ರೀಮತಿ ಪ್ರಮೀಳಾ, ಸುರೇಶ್ ಗೌಡ, ನಂದಿನಿ ಸಹಕರಿಸಿದರು.