Site icon Suddi Belthangady

ನಾಳ: ಕಣ್ಣಿನ ಉಚಿತ ತಪಾಸಣಾ ಶಿಬಿರ

ನಾಳ : ನ್ಯಾಯತರ್ಪು ನಾಳ ಹಾಲು ಉತ್ಪಾದಕರ ಸಹಕಾರಿ ಸಂಘ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ, ಐ ಮಿತ್ರ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ಸಾರ್ವಜನಿಕರಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ಮಾ.19 ರಂದು ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗಿತು.
ಸಂಘದ ಅಧ್ಯಕ್ಷ ಹಾಗೂ ಕಳಿಯ ಗ್ರಾಮ ಪಂಚಾಯತು ಸದಸ್ಯರಾದ ಸುಧಾಕರ ಮಜಲು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ,ಮಾತನಾಡುತ್ತಾ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಸದುಪಯೋಗ ಪಡೆಯುವಂತೆ ಹೇಳಿ, ಶುಭಹಾರೈಸಿದರು.


ಕಂಪ್ಯೂಟರೀಕೃತ ಕಣ್ಣಿನ ತಪಾಸಣೆ, 5 ರಿಂದ 15 ವರ್ಷಗಳ ವರೆಗಿನ ಮಕ್ಕಳಿಗೆ ಮತ್ತು 15 ವರ್ಷಗಳ ಮೇಲ್ಪಟ್ಟ ದೂರದೃಷ್ಟಿ ಮತ್ತು ಸಮೀಪ ದೃಷ್ಟಿ ತೊಂದರೆ ಇರುವ ವಯಸ್ಕರಿಗೆ ಸ್ಥಳದಲ್ಲಿ ಉಚಿತವಾಗಿ ಕನ್ನಡಕವನ್ನು ವಿತರಣೆ ಮಾಡಿದರು. ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಚಿಕಿತ್ಸೆ ಮತ್ತು ನೇತೃದಾನದ ಬಗ್ಗೆ ನುರಿತ ವೈದ್ಯರು ಮಾಹಿತಿಯನ್ನು ನೀಡಿದರು.
120 ಜನರು ಉಚಿತವಾಗಿ ಕಣ್ಣಿನ ಪರೀಕ್ಷೆ ಮಾಡಿಸಿದರು. 75 ಕನ್ನಡಕ ವನ್ನು ಉಚಿತವಾಗಿ ವಿತರಣೆ ಮಾಡಿದರು. ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಗಳ ತನಕ ಪರೀಕ್ಷಿಸುವುದು ಸ್ಥಳೀಯ ಗ್ರಾಮಸ್ಥರಿಗೆ ತುಂಬಾ ಅನುಕೂಲವಾಯಿತು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಾಳ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷರು, ಕಾರ್ಯದರ್ಶಿ, ನಿರ್ದೇಶಕರು ,ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version