Site icon Suddi Belthangady

ನಡ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ತರಬೇತಿ

ನಡ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ. ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ ಅಂಗನವಾಡಿಯಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ತರಬೇತಿಯನ್ನು ಮಾ. 23 ರಂದು ಆಯೋಜಿಸಲಾಗಿತ್ತು.

ಈ ತರಬೇತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯೆಯರು, ಸೇರಿ ಒಟ್ಟು 20 ಮಂದಿ ಸದಸ್ಯರು ಭಾಗವಹಿಸಿದರು. ಜಲಜೀವನ್ ಮಿಷನ್ ಅನುಷ್ಠಾನ ಬೆಂಬಲ ಸಂಸ್ಥೆಯ ಸಿಬ್ಬಂದಿ ಪುಷ್ಪಲತಾರವರು ಜಲಜೀವನ್ ಮಿಷನ್ ಯೋಜನೆಯ ಕುರಿತು, ಮಳೆನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

Exit mobile version