


ಉರುವಾಲು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು.ಅನುಜ್ಞಾ ಸಾಲಿಯಾನ್ ಇವರು ಶೇಕಡ 92 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.
ಇವರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಉರುವಾಲು ಇಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು,ಮಿದುಷಿ ಶ್ರೀಮತಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆ. ಇಳಂತಿಲ ಅಟಾಲ್ ನಿವಾಸಿ ನ್ಯಾಯವಾದಿ ಮನೋಹರ್ ಕುಮಾರ್ ಮತ್ತು ನಯನಾ ದಂಪತಿಯ ಪುತ್ರಿ.