ನಾಳ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ ಹಾಗೂ ಯಕ್ಷಗಾನ ಬಯಲಾಟ

0

ನ್ಯಾಯತರ್ಪು : ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸದಸ್ಯರಿಂದ ಭಜನಾ ಸೇವೆ, ದೇವರಿಗೆ ವಿಶೇಷ ರಂಗಪೂಜೆ, ದೈವಗಳಿಗೆ ಪರ್ವ ಸೇವೆ, ಯಕ್ಷಗಾನ ಬಯಲಾಟ ಹಾಗೂ ಸಾರ್ವಜನಿಕ ಅನ್ನದಾನ ಸೇವೆ ಮಾ.24 ರಂದು ದೇವಸ್ಥಾನದಲ್ಲಿ ಜರುಗಿತು.
ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸದಸ್ಯರು ಅತ್ಯುತ್ತಮ ಭಜನಾ ಮಂಡಳಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇತ್ತೀಚಿಗೆ ಭಜನಾ ಮಂಡಳಿಗಳಿಗೆ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮೂಲಕ ಸುಮಾರು 5 ಲಕ್ಷ ರೂಪಾಯಿ ಬಹುಮಾನವನ್ನು ಪಡೆದರು. ಆ ಪ್ರಯುಕ್ತ ನಾಳ ಶ್ರೀ ದುರ್ಗಾಪರಮೇಶ್ವರಿ ದೇವರಿಗೆ ವಿಶೇಷವಾಗಿ ಭಜನಾ ಸೇವೆ, ವಿಶೇಷ ರಂಗ ಪೂಜೆ ದೈವಗಳಿಗೆ ಪರ್ವ ಸೇವೆ, ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಅಮರ ಶಿಲ್ಪಿ ವೀರ ಶಂಭು ಕಲ್ಕುಡ ತುಳು ಯಕ್ಷಗಾನ ಬಯಲಾಟ ದೇವಸ್ಥಾನದ ವಠಾರದಲ್ಲಿ ನಡೆಯಿತು.


ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರಧಾನ ಆರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತೃತ್ವದಲ್ಲಿ ವಿಧಿ-ವಿಧಾನಗಳೊಂದಿಗೆ ನೆರವೇರಿತು.


ಈ ಸಂದರ್ಭದಲ್ಲಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ,ಸಮಿತಿ ಸದಸ್ಯರಾದ ವಸಂತ ಮಜಲು, ಅಂಭಾ ಬಿ.ಆಳ್ವ ನಾಳ, ಉಮೇಶ್ ಕೇಲ್ದಡ್ಕ, ರಾಜೇಶ್ ಅಡ್ಡಕೊಡಂಗೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮುದ್ದುಂಜ, ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ನಾಳ ಭಜನಾ ಮಂಡಳಿ, ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೋಳ್ಯ, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ರೀತಾ ಚಂದ್ರಶೇಖರ್ ನಾಳ, ಭಜನಾ ಮಂಡಳಿ ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

p>

LEAVE A REPLY

Please enter your comment!
Please enter your name here