ಎ.3 ರಿಂದ 7 ರವರೆಗೆ ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

0

ಪತ್ರಿಕಾ ಗೋಷ್ಠಿ
ಮೇಲಂತಬೆಟ್ಟು : ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಶ್ರೀ ದೇವಿ ಭಗವತಿ ಅಮ್ಮನವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎ.3 ರಿಂದ 7 ರ ವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ. ಎಂ. ದಯಾಕರ ಭಟ್, ಪ್ರಧಾನ ಕಾರ್ಯದರ್ಶಿ ರಾಜೀವ್ ಸಾಲಿಯಾನ್ ಮುಂಡೂರು, ಧರ್ಮದರ್ಶಿ ಯೋಗೀಶ ಪೂಜಾರಿ ಹೇಳಿದರು.

ಅವರು ಶ್ರೀ ದೇವಿ ಭಗವತಿ ಅಮ್ಮನಾವರ ದೇವಸ್ಥಾನದಲ್ಲಿ ಮಾ.25 ರಂದು ಕರೆದ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು. 2009ರಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ವೈಭವಪೂರ್ಣವಾಗಿ ಜರಗಿತ್ತು. ಇದೀಗ 12 ವರ್ಷದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದಂಗಳವರ ಕೃಪಾಶಿರ್ವಾದಗಳೊಂದಿಗೆ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಯೋತಿಷಿ ತಿಲಕಂ ಶಶಿಧರನ್ ಮುಂಗಾಡೆ ಇವರು ನಡೆಸಿ ಕೊಟ್ಟ ಅಷ್ಟ ಮಂಗಳ ಚಿಂತನೆಯಲ್ಲಿ ಕಂಡು ಬಂದ ದೋಷಗಳನ್ನು ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ನಡ್ವಂತಾಡಿ ವೇ. ಮೂ. ಶ್ರೀಪಾದ ಪಾಂಗಣ್ಣಾಯ ರವರ ನೇತೃತ್ವದಲ್ಲಿ ನಿವೃತ್ತಗೊಳಿಸಿ ಸುರೇಶ ಶೆಟ್ಟಿ ಮಾಪಲಾಡಿ ಇವರ ಅಧ್ಯಕ್ಷತೆಯಲ್ಲಿ ಸುಮಾರು ರೂ.55 ಲಕ್ಷ ವೆಚ್ಚದಲ್ಲಿ ಜೀರ್ಣೋದ್ಧಾರ ಕಾರ್ಯ ಮಾಡಲಾಗಿದೆ.

ಶ್ರೀ ದೇವಿ ಭಗವತಿ ಅಮ್ಮನವರಿಗೆ ಪಾಣಿಪೀಠ, ಶ್ರೀ ಮಹಾ ಗಣಪತಿ ದೇವರಿಗೆ ನೂತನ ಗುಡಿ, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಮರದ ಪೀಠ, ಕಾಲ ಭೈರವ ಕಟ್ಟೆ, ದೇವಸ್ಥಾನದ ಸುತ್ತು ಪೌಳಿ ಸೇರಿದಂತೆ ಅಭಿವೃದ್ಧಿ ಕಾರ್ಯ ನಡೆದಿದೆ. ಈ ಎಲ್ಲಾ ಕೆಲಸಗಳು ಧರ್ಮದರ್ಶಿ ಯೋಗೀಶ್ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಾ ಬರುತ್ತಿದೆ. ಬ್ರಹ್ಮಕಲಶೋತ್ಸವ ಯಶಸ್ವಿಗೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಹಾಗೂ ಪದಾಧಿಕಾರಿಗಳ ಸಮಿತಿ ಮತ್ತು 21 ಉಪ ಸಮಿತಿ ರಚಿಸಲಾಗಿದ್ದು ಊರ ಪರ ಊರ ಭಕ್ತರ ಸಹಕಾರದಿಂದ ನಡೆಯಲಿದೆ.

ಈ ಸಂದರ್ಭದಲ್ಲಿ ಧಾರ್ಮಿಕ ಸಭೆ, ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು ಪತ್ರಿಕಾ ಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುರೇಶ ಶೆಟ್ಟಿ ಮಾಪಲಾಡಿ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ, ಚಂದ್ರರಾಜ್, ಯೋಗೀಶ್ ಕುಲಾಲ್, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ ಅಂಕಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here