ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ವಲ ಉದ್ಯಮಿ ಪ್ರಶಸ್ತಿ

0

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಏಷ್ಯಾ ನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಬಳಗದ ಪ್ರತಿಷ್ಠಿತ ಉಜ್ವಲ ಉದ್ಯಮಿ ಪ್ರಶಸ್ತಿ ದೊರೆತಿದೆ.
ಶಿಕ್ಷಣ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ಬಂದಿದೆ.

ಬೆಳ್ತಂಗಡಿ ತಾಲೂಕಿನ ಬಂಗಾಡಿಯವರಾದ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ದಶಕಗಳಿಗೂ ಮೀರಿದ ಬೋಧನಾನುಭವ ಹೊಂದಿದವರು. ಉಜಿರೆಯ ಬಳಿ ಎಕ್ಸೆಲ್ ಕೋಚಿಂಗ್ ಸೆಂಟರ್ ಸ್ಥಾಪಿಸಿ..ನೂರಾರು ವಿದ್ಯಾರ್ಥಿಗಳ ನೀಟ್, ಜೆ ಇ ಇ , ಸಿ ಇ ಟಿ ಕ್ಲಿಯರ್ ಮಾಡುವ ಕನಸ್ಸನ್ನು ನನಸು ಮಾಡಿದ ಹಿರಿಮೆ ಸುಮಂತ್ ಅವರದ್ದು. ಬಳಿಕ ಗುರುವಾಯನಕೆರೆ ಯ ವಿಶಾಲ ಆವರಣದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜು ಹಾಗೂ ಲಾಂಗ್ ಟರ್ಮ್ ನೀಟ್ ಕೋಚಿಂಗ್ ಸೆಂಟರ್ ಸ್ಥಾಪಿಸಿ ಇದೀಗ ರಾಜ್ಯದ ವಿವಿಧ ಜಿಲ್ಲೆಗಳ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ಮಾಡುವಂತಾಗಿದೆ.
ಎಕ್ಸೆಲ್ ಪದವಿ ಪೂರ್ವ ಕಾಲೇಜು ಪಿಯು ಬೋರ್ಡ್ ಎಕ್ಸಂ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಗಳಲ್ಲೂ ಸದಾ ಮುಂದಿದ್ದು ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಿದೆ

ಮಂಗಳೂರಿನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಿದ್ದರು.

LEAVE A REPLY

Please enter your comment!
Please enter your name here