ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆಯು ಮಾ.25 ರಂದು ಉಜಿರೆಯ ಓಷನ್ ಪರ್ಲ್ ಹೋಟೆಲ್ ನಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಹೈವೆ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದು ಸಭೆಯಲ್ಲಿ ಹೈವೆ ಬಗ್ಗೆ ಮಾಹಿತಿ ನೀಡಿದರು. ಚಾರ್ಮಾಡಿ ಘಾಟ್ ರಸ್ತೆ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದರು.
ಬೆಳ್ತಂಗಡಿ ವರ್ತಕರ ಸಂಘದ ಪದಾಧಿಕಾರಿಗಳು ಶಾಸಕರಲ್ಲಿ ಉಜಿರೆಯ ಪಾರ್ಕಿ೦ಗ್ ಹಾಗೂ ವಿದ್ಯುತ್ ಸಮಸ್ಯೆ, ವಿದ್ಯುತ್ ಸ್ಥಾವರ ನಿರ್ಮಾಣದ ಬಗ್ಗೆ ದೂರು ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರು ಮತ್ತು ಸದಸ್ಯರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
p>