ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಲ್ಲಿ ನಡೆಯುತ್ತಿರುವ 63 ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.26 ರಂದು ರಾತ್ರಿ ಶ್ರೀ ಅನ್ನಪೂರ್ಣೇಶ್ವರಿ ದೇವಿ ಮೂರ್ತಿ ಬಲಿ ಉತ್ಸವ, ಪುಷ್ಪ ರಥೋತ್ಸವವು ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಿತು.
ಬೆಳಿಗ್ಗೆ ಮಹಾ ಮೃತ್ಯುಂಜಯ ಹೋಮ, ಮಧ್ಯಾಹ್ನ ಅನ್ನಪೂರ್ಣೇಶ್ವರಿ ದೇವಿಗೆ ಮಹಾ ಪೂಜೆ, ನಾಗ ದೇವರಿಗೆ ಪಂಚಾಮೃತ ಅಭಿಷೇಕ ನಡೆಯಿತು.
ಸಂಜೆ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಮತ್ತು ಬಳಗದವರಿಂದ ಮಸ್ತ್ ಮ್ಯಾಜಿಕ್ ನಡೆಯಿತು. ಕಾರ್ಯಕ್ರಮದ ಪ್ರಯೋಜಕ ಮಂಗಳೂರು ಮಹಾ ನಗರ ಪಾಲಿಗೆ ಕಾರ್ಪೋರೇಟರ್ ಕಿರಣ್ ಕುಮಾರ್ ಕೋಡಿಕಲ್ ಮತ್ತು ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಇವರನ್ನು ಸ್ವಾಮೀಜಿಯವರು ಗೌರವಿಸಿದರು.
p>