





ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಲ್ಲಿ ನಡೆಯುತ್ತಿರುವ 63 ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.25 ರಂದು ರಾತ್ರಿ ರಜತ ಪಾಲಕಿ ಉತ್ಸವ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಿತು.




ಬೆಳಿಗ್ಗೆ ನವಗ್ರಹ ಶಾಂತಿ ಹೋಮ, ನವಗ್ರಹಗಳಿಗೆ ವಿಶೇಷ ಪೂಜೆ ಮಹಾ ಪೂಜೆ ನಡೆಯಿತು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಾನ ನೃತ್ಯ ಅಕಾಡೆಮಿ ಮಂಗಳೂರು ಇದರ ನಿರ್ದೇಶಕಿ ವಿದ್ಯಾಶ್ರೀ ರಾಧಾಕೃಷ್ಣ ಮತ್ತು ಬಳಗದವರಿಂದ ನೃತ್ಯ ಸಂಗಮ ಹಾಗೂ ನೃತ್ಯ ರೂಪಕ ನಡೆಯಿತು.








