ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ

0

ಪುದುವೆಟ್ಟು : 2022-23ನೇ ಸಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಒಂದು ದಿನದ ಬೇಸಿಗೆ ಶಿಬಿರವನ್ನು ಸದಾನಂದ ಮುಂಡಾಜೆಯವರು ಉದ್ಘಾಟಿಸಿದರು.

ಅವರು ಇಂತಹ ಬೇಸಿಗೆ ಶಿಬಿರದ ಸಧ್ಬಳಕೆಯನ್ನು ವಿದ್ಯಾರ್ಥಿಗಳು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಂಡು ತಮ್ಮ ನಿತ್ಯ ಜೀವನದಲ್ಲಿ ಬಳಕೆ ಮಾಡಿಕೊಳ್ಳಬೇಕಾಗಿ ತಿಳಿಸಿದರು.

ಬೇಸಿಗೆ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುನಿಲ್ ಧರ್ಮಸ್ಥಳ ಆಗಮಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ಈ ವರ್ಷ ನಮಗೆ ಮಾತೃ ಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಉತ್ತಮ ಮಾರ್ಗದರ್ಶಕರು ಸಿಕ್ಕಿದ್ದಾರೆ ಇದರ ಬಳಕೆಯನ್ನು ಮಾಡಿಕೊಂಡು ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಕಾರ್ಯ ರೂಪಕ್ಕೆ ತರಬೇಕು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಸದಾನಂದ ರವರು ತಾವೇ ರಚಿಸಿರುವ ಜಲ್ಲಿ ಕಲ್ಲುಗಳು ಎಂಬ ಪುಸ್ತಕ ಶಾಲೆಯ ಗ್ರಂಥಾಲಯಕ್ಕೆ ನೀಡಿದರು. ಶಾಲೆಯ ಹಿರಿಯ ಶಿಕ್ಷಕ ಜೋಸೆಫ್ ಪಿಎಂ ರವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಮೊದಲ ದಿನದ ಬೇಸಿಗೆ ಶಿಬಿರದಲ್ಲಿ ಸುನೀಲ್ ರವರು ರಂಗ ಗೀತೆ, ಜಾಗೃತಿ ಗೀತೆ, ಜಾನಪದ ಗೀತೆ, ನಾಟಕಭಿನಯದ ಬಗ್ಗೆ ಮಕ್ಕಳಿಗೆ ಉತ್ತಮ ರೀತಿಯಲ್ಲಿ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ನಿಶಾಂತ್ ಸ್ವಾಗತಿಸಿದರು. ಶ್ರೀಮತಿ ಶೀಲಾ ಧನ್ಯವಾದಗೈದು, ಸುಜಾತಾ ಬಿ ರವರು ನಿರೂಪಿಸಿದರು. ಶಾಲೆಯ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

p>

LEAVE A REPLY

Please enter your comment!
Please enter your name here