Site icon Suddi Belthangady

100 ದಿನ 116 ಕೆರೆಗಳನ್ನು ಪುನಶ್ಚೇತನದಲ್ಲೊಂದು ಹೊಸ ಮೈಲುಗಲ್ಲು ಸೃಷ್ಟಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಧರ್ಮಸ್ಥಳ: ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಂತೆ ಸಂಸ್ಥೆಯು ನಾದುರಸ್ತಿಯಲ್ಲಿರುವ ಕರೆಗಳಿಗೆ ಕಾಯಕಲ್ಪ ಕೊಡುವ ಕಾರ್ಯ ನಡೆಸುತ್ತಿದ್ದು, ವರ್ಷ ರಾಜ್ಯಾದ್ಯಂತ 116 ಕೆರೆಗಳ ಪುನಶ್ಚೇತನ ಕಾರ್ಯ ನಡೆಸಲಾಗಿದೆಯೆಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಂ.ಹೆಚ್‌ ಮಂಜುನಾಥ್ ರವರು ತಿಳಿಸಿದರು.

ರಾಜ್ಯದಲ್ಲಿ ಸುಮಾರು 36000 ಕರೆಗಳಿವೆಯೆಂಬ ಮಾಹಿತಿಯಿದೆ. ಈ ಕರೆಗಳು ಪುನಶ್ಚೇತನಗೊಂಡು ನೀರು ತುಂಬಿಕೊಂಡರೆ ರಾಜ್ಯದ ಸಹಸ್ರಾರು ಎಕರೆ ಪ್ರದೇಶಕ್ಕೆ ನೀರುಣಿಸಲು ಸಾಧ್ಯವಾಗಬಹುದು. ಆದರೆ ಇಂದು ಅದೆಷ್ಟೋ ಕೆರೆಗಳು ತಮ್ಮ ನೀರು ಸಂಗ್ರಹಣೆಯ ಸಾಮರ್ಥ್ಯವನ್ನು ಕಳೆದುಕೊಂಡಿವೆ. ನಿರ್ವಹಣೆಯಿಲ್ಲದ ಗಿಡ-ಗಂಟೆಗಳು ಬೆಳೆದು ಹೂಳು ತುಂಬಿಕೊಂಡಿವೆ.

ಮರುಳು, ಮಣ್ಣಿಗಾಗಿ ಕೆರೆಯ ಒಡಲನ್ನು ಆಗೆದು ವಿರೂಪಗೊಳಿಸಲಾಗಿದೆ. ಒತ್ತುವರಿಯಿಂದಾಗಿ ನೀರು ಹರಿದು ತರುತ್ತಿದ್ದ ಕಾಲುವೆಗಳು ಇಲ್ಲದಂತಾಗಿದೆ. ಈ ಎಲ್ಲಾ ಕಾರಣಗಳಿಂದ ಇಡೀ ಗ್ರಾಮಕ್ಕೆ ನೀರುಣಿಸುತ್ತಿದ್ದ ಕರೆಗಳಿದ್ದರೂ ಹನಿ ನೀರಿಗಾಗಿ ಪರದಾಡುತ್ತಿರುವ ರೈತರ ಹಾಗೂ ನೀರಿಗಾಗಿ ಕಿ.ಮೀ ಗಟ್ಟಲೆ ಅಲೆಯುತ್ತಿರುವ ಮಹಿಳೆಯರ ಸಂಕಷ್ಟ ಗಮನಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ಪಾರಂಪರಿಕ ಕರೆಗಳ ಪುನಶ್ವೇತನಕ್ಕಾಗಿಯೇ “ನಮ್ಮೂರು ನಮ್ಮ ಕರೆ” ಕಾರ್ಯಕ್ರಮವನ್ನು 2016ರಲ್ಲಿ ಪ್ರಾರಂಭಿಸಿದರು. ಇದರಂತೆ ಪ್ರಸ್ತುತ ವರ್ಷ ರಾಜ್ಯದ 116 ಕೆರೆಗಳ ಮನಶ್ವೇತನ ಕಾರ್ಯ ನಡೆಸಲಾಗಿದ್ದು, ಕರೆಗಳು ಸುಂದರವಾಗಿ ಮಿನತನಗೊಂಡು ನೀರು ಸಂಗ್ರಹಣೆಗೆ ಆಣಿಯಾಗಿವೆ.

ದುರಸ್ತಿಗೊಳಿಸಿದ ಕೆರೆಗಳ ವೈಶಿಷ್ಟ್ಯತೆ:

ಸುತ್ತ ಅರಣ್ಯೀಕರಣಕ್ಕಾಗಿ ಮುಂದಿನ ಮಳೆಗಾಲದಲ್ಲಿ ಕೆರೆಯಂಗಳದಲ್ಲಿ ಗಿಡನಾಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕರೆ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಪ್ರಾದೇಶಿಕವಾರು ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ಕೆರೆಯ ಸುತ್ತ ನೆಡಲಾಗುವುದು. ಹೆಸರೇ ಸೂಚಿಸುವಂತೆ “ನಮ್ಮೂರು-ನಮ್ಮಕೆರೆ” ಜನಸಹಭಾಗಿತ್ವದ ಕಾರ್ಯಕ್ರಮವಾಗಿದೆ. ಈ ಬಾರಿ ನಡೆದ ಕೆರಗಳ ಪುನಶ್ವೇತನ ಕಾರ್ಯದಲ್ಲಿ ರೈತರು ಉತ್ಸಾಹದಿಂದ ಹೂಳು ಸಾಗಾಟದಲ್ಲಿ ಭಾಗವಹಿಸಿದರು. ಫಲವತ್ತಾದ ಹೂಳನ್ನು ತಮ್ಮ ಹೊಲ ಗದ್ದೆಗಳಿಗೆ ಸಾಗಿಸಿ, ಕರೆ ಅಭಿವೃದ್ಧಿ ಕೆಲಸದಲ್ಲಿ ಕೈ ಜೋಡಿಸಿ ಊರ ಕೆರೆಯ ಪುನರ್ ನಿರ್ಮಾಣ ಕಂಡು ಸಂಭ್ರಮಿಸಿದರು. ಕಾಮಗಾರಿ ಸಂದರ್ಭ ಸ್ವಾಮೀಜಿಗಳು, ಶಾಸಕರು ಹಾಗೂ ಇವರ ಜನಪ್ರತಿನಿಧಿಗಳು, ವಿವಿಧ ಇಲಾಖಾಧಿಕಾರಿಗಳು ಭೇಟಿ ನೀಡಿ ಮೆಚ್ಚಿ ಪ್ರೋತ್ಸಾಹಿಸಿರುವು ವಿಶೇಷವಾಗಿತ್ತು ಎಂದು ಸಂಖ್ಯೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎ.ಹೆಚ್‌. ಮಂಜುನಾಥ್‌ರವರು ತಿಳಿಸಿದರು.

Exit mobile version