





ಬೆಳ್ತಂಗಡಿ: ಭಾರತ ರಾಷ್ಟ್ರೀಯ ಕಾಂಗ್ರೆಸ್ ಐ ಪಕ್ಷದ ದ.ಕ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ಉಜಿರೆಯ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ಅವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರು ಆದೇಶ ನೀಡಿದ್ದಾರೆ.



ಪಕ್ಷದ ಜಿಲ್ಲಾಧ್ಯಕ್ಷರು, ಪಕ್ಷದ ಬೆಳ್ತಂಗಡಿಯ ಮಾಜಿ ಶಾಸಕರುಗಳು, ಪ್ರಸ್ತುತ ಅಭ್ಯರ್ಥಿ ಹಾಗೂ ಮುಖಂಡರುಗಳ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ.
ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಓರ್ವರಾಗಿರುವ ಅವರು ಈ ಹಿಂದೆ ಜಿಲ್ಲಾ ಘಟಕದಲ್ಲಿ ಉಪಾಧ್ಯಕ್ಷರಾಗಿ ಹಾಗೂ, ವಕ್ಫ್ ಜಿಲ್ಲಾ ಸಲಹಾ ಸಮಿತಿಯ ಸದಸ್ಯರಾಗಿ ಎರಡು ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.








