ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.4 ರಂದು ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್, ದ. ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ನೋಟರಿ ನ್ಯಾಯವಾದಿ ಭಗೀರಥ ಜಿ., ಮುಂಡೂರು ಮಂಗಳಗಿರಿ ಶ್ರೀ ನಾಗ ಕಲ್ಲುರ್ಟಿ ಕ್ಷೇತ್ರದ ಆಡಳಿತ ಮೊಕ್ತೇಸರ ರಾಜೀವ್ ಅತಿಥಿಗಳಾಗಿ ಭಾಗವಹಿಸಿದ್ದರು.
- ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್, ದೇವಸ್ಥಾನದ ಧರ್ಮದರ್ಶಿ ಯೋಗೀಶ್ ಪೂಜಾರಿ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ, ಬರಮೇಲು, ಅಧ್ಯಕ್ಷ ಸುರೇಶ್ ಶೆಟ್ಟಿ ಮಾಪಲಾಡಿ , ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ,ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ, ಸೇರಿದಂತೆ ವಿವಿಧ ಸಮಿತಿಯ ಸದಸ್ಯರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು.ಗ್ರಾಮಭಿವೃದ್ಧಿ ಯೋಜನೆಯ ಪುತ್ತೂರು ಪ್ರಾದೇಶಿಕ ನಿರ್ದೇಶಕ ಪ್ರವೀಣ್ ಸ್ವಾಗತಿಸಿದರು, ಸುಧಾ ಆರ್. ನಿರೂಪಿಸಿದರು.ಸಂಜೆ 5 ರಿಂದ ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಬಳಿಕ ಸ್ಥಳೀಯ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು ಜರಗಿತು.