Site icon Suddi Belthangady

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೆತ್ತರದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

ಮಚ್ಚಿನ: ಬೇಸಿಗೆ ಶಿಬಿರದ ಪ್ರಯುಕ್ತ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಜೆ ಸಿ ಐ ಘಟಕ ಮಡಂತ್ಯಾರು ಇವರ ಸಹಭಾಗಿತ್ವದಲ್ಲಿ ನೆತ್ತರ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ನಡೆಯಿತು.


ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಮೋಹಿನಿ ಯೋಗೀಶ್ ಇವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮವನ್ನು ಜೆಸಿಐ ಘಟಕ ಮಡಂತ್ಯಾರು ಇದರ ಅಧ್ಯಕ್ಷ ಅಶೋಕ್ ಕುಮಾರ್ ಗುಂಡಿಯಲ್ಕೆ ಇವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿ, ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾರ್ಯ ನಮ್ಮಿಂದಾಗ ಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ (ರಿ.) ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಸುಖೇಶ್ ಬಾಬು, ಜೆಸಿಐ ನ ವಲಯಾಧಿಕಾರಿ ನವೀನ್ ಕೊಡ್ಲಕ್ಕೆ, ಯಕ್ಷಗಾನ ನಾಟ್ಯ ಕಲಿಸುವ ಗುರುಗಳಾದ ದೇವಿಪ್ರಸಾದ್ ಗುರುವಾಯನಕೆರೆ, ಶಾಲಾ ಮುಖ್ಯೋಪಾಧ್ಯಾಯ ಸೀತಾರಾಮ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಗೌರವ ಶಿಕ್ಷಕಿ ಚಿರಂಜಿನಿ ನಿರೂಪಿಸಿ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಶಾಲಾ ಸಹಶಿಕ್ಷಕಿ ಶ್ರೀಮತಿ ರೂಪಾ ರುಫೀನಾ ರೊಡ್ರಿಗಸ್ ಧನ್ಯವಾದವಿತ್ತರು.

Exit mobile version