ಮೇಲಂತಬೆಟ್ಟು ಶ್ರೀ ದೇವಿ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ಸುಬ್ರಹ್ಮಣ್ಯ ಸ್ವಾಮೀಜಿಯವರಿಂದ ಆಶೀರ್ವಚನ

0

ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ. 6 ರಂದು ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಮಂಗಳೂರು ವೆನ್ ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸದಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮ ಶ್ರೀ ನಡ್ವ0ತಾಡಿ ವೇ. ಮೂ. ಶ್ರೀಪಾದ ಪಾಂಗಣ್ಣಾಯ, ಬದ್ಯಾರು ಹಿಬರೋಡಿ ದೇವದಾಸ ಶೆಟ್ಟಿ, ಮುಂಬೈ ತುಂಗಾ ಆಸ್ಪತ್ರೆಯ ನಿರ್ದೇಶಕ ಮಾಲಾಡಿ ಹೊಸಮನೆ ಹರಿಪ್ರಸಾದ್ ಶೆಟ್ಟಿ, ವಸಂತಿ ಶೆಟ್ಟಿ ಮಾಲಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುರೇಂದ್ರ, ನಿರ್ದೇಶಕ ಪ್ರವೀಣ,ಬೆಳ್ತಂಗಡಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಧರ್ಮದರ್ಶಿ ಯೋಗೀಶ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಂ.ಎಂ. ದಯಾಕರ್, ಜಯಾನಂದ ಲಾಯಿಲ, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್, ಕೋಶಾಧಿಕಾರಿ ಸಂದೀಪ್ ಅನುಗ್ರಹ,ಪ್ ಯಶವಂತ ಶಾಂತಿ, , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಪಲಾಡಿ , ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ,ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ,ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಸೇರಿದಂತೆ ವಿವಿಧ ಸಮಿತಿಯ ಸದಸ್ಯರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು.ಬೆಳಿಗ್ಗೆ ಶ್ರೀ ದೇವಿ ಭಗವತಿ ಅಮ್ಮನವರ ಹಾಗೂ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಶ್ರೀ ಗುರುಗಳ ಪೀಠ ಸ್ಥಾಪನೆ ನಡೆಯಿತು. ಸಂಜೆ ಬೆಳ್ತಂಗಡಿ ಶ್ರೀ ಕೃಷ್ಣ ಮುಖ್ಯ ಪ್ರಾಣ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರಗಿತು.ಧಾರ್ಮಿಕ ಸಭಾ ಕಾರ್ಯಕ್ರಮದ ಬಳಿಕ ಪಲ್ಲವಿ ಕಲಾವಿದೆರ್ ಕಾರ್ಕಳ, ಜಗನ್ನಾಥ ಶೆಟ್ಟಿ ಕುಡ್ಲ ಅಭಿನಯದಲ್ಲಿ ಶಿವ ಭಕ್ತೆ ಮಾರ್ಕ0ಡೇಯೆ ತುಳು ನಾಟಕ ಪ್ರದರ್ಶನ ಗೊಂಡಿತು.

ಈ ಸಂದರ್ಭದಲ್ಲಿ ಸತ್ಯದ ಸಾನಿಧ್ಯ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಿದ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here